ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸ್ಕ್ಯಾನಿಂಗ್ ಸೆಂಟರ್‌ಗಳ ತಪಾಸಣೆ ನಿರಂತರವಾಗಿರಲಿ; ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ

ಸ್ಕ್ಯಾನಿಂಗ್ ಸೆಂಟರ್‌ಗಳ ತಪಾಸಣೆ ನಿರಂತರವಾಗಿರಲಿ; ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ

Fri, 25 Oct 2024 00:46:23  Office Staff   S O News

ಕಾರವಾರ: ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ನಿಯಮಿತವಾಗಿ ತಪಾಸಣೆ ಮಾಡುವ ಮೂಲಕ, ಜಿಲ್ಲೆಯಲ್ಲಿ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಕಾಯ್ದೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಸೂಚನೆ ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ಯಂತ್ರ ವಿಧಾನಗಳ ನಿಷೇಧ ಅಧಿನಿಯಮ ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ಜಿಲ್ಲೆಯಲ್ಲಿ ಪಿಸಿ ಅಂಡ್ ಪಿ.ಎನ್.ಡಿ.ಟಿ ಕಾಯ್ದೆಯಡಿ ನೋಂದಣಿಯಾಗಿ ಕಾರ್ಯನಿರ್ವಹಿಸುತ್ತಿರುವ 71 ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಸದಸ್ಯರು ತಪಾಸಣೆ ನಡೆಸಬೇಕು. ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಕಾನೂನು ರೀತ್ಯಾ ನಿರ್ವಹಿಸಬೇಕಾದ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ, ದಾಖಲಾತಿಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿರುವ ಬಗ್ಗೆ, ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕುರಿತ ಜಾಗೃತಿ ಫಲಕಗಳನ್ನು ಅಳವಡಿಸುರುವ ಬಗ್ಗೆ ಸಮಗ್ರ ತಪಾಸಣೆ ಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲೆಯ ತಾಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಸ್ಕ್ಯಾನಿಂಗ್ ಯಂತ್ರಗಳನ್ನು ಸೂಕ್ತ ರೀತಿಯಲ್ಲಿ ಬಳಕೆ ಮತ್ತು ನಿರ್ವಹಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಇವುಗಳ ಸೇವೆಯು ಸಮರ್ಪಕವಾಗಿ ದೊರೆಯುವಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತರಕರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅನ್ನಪೂರ್ಣ ವಸ್ತçದ್, ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್, ಮಕ್ಕಳ ತಜ್ಞ ಡಾ.ವಿಶ್ವನಾಥ್ ಮಾಚಕನೂರ, ರೇಡಿಯಾಲಜಿಸ್ಟ್ ಡಾ.ಯುವರಾಜ ಪಟವರ್ದನ್, ವಕೀಲ ಮಾರುತಿ ಮರಜ್ಜ, ಸಾಂತ್ವನ ಜನಸೇವಾ ಕೇಂದ್ರದ ಶ್ರೀಕಾಂತ ಮಹಾದೇವ ನಾಯ್ಕ್ ಉಪಸ್ಥಿತರಿದ್ದರು.
 


Share: