ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ
ರೋಗಿಯೊಬ್ಬರನ್ನ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ವಾಹನ ಪಲ್ಟಿಯಾದ ಘಟನೆ ಸಂಭವಿಸಿದೆ.
ಇಲ್ಲಿನ ಹೊಸಪಟ್ಟಣ ಕ್ರಾಸ್ ಹತ್ತಿರ ಈ ಅವಘಡ ನಡೆದಿದೆ. ಕುಮಟಾ ಕೆನರಾ ಹೆಲ್ತ್‌ಕೇರ್‌ನಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ಪಾರ್ಶ್ವವಾಯು ತುತ್ತಾದ ರೋಗಿಯೊಬ್ಬರನ್ನ ಕರೆದುಕೊಂಡು ಹೋಗಲಾಗುತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಪಲ್ಟಿ ಹೊಡೆದಿದೆ.
ಅಪಘಾತದ ಪರಿಣಾಮವಾಗಿ ಪಾರ್ಶ್ವವಾಯುವಿಗೆ ತುತ್ತಾದ ಕಮಲಾ ಪಟಗಾರ ಹಾಗೂ ಅಂಬುಲೆನ್ಸ್ ಚಾಲಕ ಸೋಮನಾಥ ನಾಯ್ಕ ಇವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ವಾಹನದಲ್ಲಿ ಒಟ್ಟೂ ನಾಲ್ವರಿದ್ದರು. ಘಟನೆ ಬಳಿಕ ರೋಗಿ ಹಾಗೂ ರೋಗಿಯ ಸಂಬಂಧಿಕರನ್ನು ಬೇರೆ ಅಂಬುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಕಳುಹಿಸಿಕೊಡಲಾಗಿದೆ. ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.