ಹೊನ್ನಾವರ: ಹೊನ್ನಾವರ ತಾಲೂಕಿನ ಹಳದಿಪುರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾಗಿ ವರದಿಯಾಗಿದೆ.
ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ ಶಂಕರ ಹೆಗಡೆ (55) ಎಂದು ಗುರುತಿಸಲಾಗಿದೆ. ಏಕಮುಖ ರಸ್ತೆಯಲ್ಲಿ ಬೈಕ್ ಚಲಾಯಿಸಲು ಯತ್ನಿಸುತ್ತಿದ್ದಾಗ ಹೊನ್ನಾವರದಿಂದ ಕುಮಟಾ ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಶಂಕರ್ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಅಪಘಾತದಲ್ಲಿ ಶಂಕರ್ ಅವರ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಇದು ಅವರ ಸಾವಿಗೆ ಕಾರಣವಾಯಿತು ಎನ್ನಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಹೊನಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.